ಗಂಗಾಕಲ್ಯಾಣ ಯೋಜನೆ ಎಸ್‌ಸಿಪಿ-ಟಿಎಸ್‌ಪಿ ಹಣ ಬಳಕೆ ವಿಚಾರಕ್ಕೆ ಇಬ್ಬರು ಪ್ರಭಾವಿ ಸಚಿವರ ನಡುವೆ ಸಚಿವ ಸಂಪುಟ ಸಭೆಯಲ್ಲೇ ಮಾತಿನ ಜಟಾಪಟಿ ನಡೆದಿದ್ದು, ಸಭೆಯಲ್ಲಿ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತ್ಯೇಕ ಸಭೆ ನಡೆಸಿ ಸಂಧಾನ ಮಾಡಲು ತೀರ್ಮಾನಿಸಲಾಗಿದೆ.
ಗುಜರಾತ್‌ನ ಭೂಪೇಂದ್ರ ಪಟೇಲ್ ನೇತೃತ್ವದ ಸಚಿವ ಸಂಪುಟದ 16 ಸಚಿವರು ಗುರುವಾರ ರಾಜೀನಾಮೆ ನೀಡಿದ ಬೆನ್ನಲ್ಲೇ, ಶುಕ್ರವಾರ 26 ಸಚಿವರನ್ನೊಳಗೊಂಡ ನೂತನ ಸಂಪುಟವನ್ನು ಪುನಾರಚಿಸಲಾಗಿದೆ.
ರಾಜ್ಯ ಸರ್ಕಾರದಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ, ಇದೆಲ್ಲಾ ಊಹಾಪೋಹ. ಸಿದ್ದರಾಮಯ್ಯ ಅವರೇ 5 ವರ್ಷವೂ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ನವೆಂಬರ್ ಕ್ರಾಂತಿ ಮುನ್ಸೂಚನೆ ದೊರೆತ ಬೆನ್ನಲ್ಲೇ ಸಚಿವರಾದ ಡಾ.ಜಿ.ಪರಮೇಶ್ವರ್, ಎಚ್.ಸಿ. ಮಹದೇವಪ್ಪ, ಸತೀಶ್ ಜಾರಕಿಹೊಳಿ ಅವರು ಪ್ರತ್ಯೇಕ ಸಭೆ ನಡೆಸಿದ್ದು, ದಲಿತ ಸಚಿವರ ನಡೆ ತೀವ್ರ ಕುತೂಹಲ ಮೂಡಿಸಿದೆ.
‘ನವೆಂಬರ್ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದೆ. ಬಳ್ಳಾರಿಯವರೇ ಆಗಿರುವ ಬಿ.ನಾಗೇಂದ್ರ ಅವರು ಮತ್ತೆ ಸಂಪುಟ ಸೇರಲಿದ್ದು, ಇನ್ನು 15 ದಿನಗಳಲ್ಲಿ ಅವರಿಗೆ ಸಚಿವರಾಗುವ ಯೋಗ ಕೂಡಿ ಬರಲಿದೆ. ಅವರು ಬಳ್ಳಾರಿ ಉಸ್ತುವಾರಿ ಸಚಿವರಾಗಲಿದ್ದಾರೆ’ ಎಂದು ಸಚಿವ ಜಮೀರ್ ಅಹ್ಮದ್ ತಿಳಿಸಿದ್ದಾರೆ.