ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಕಿತ್ತಾಡುತ್ತಿದ್ದಾರೆ. ಜನರಿಗೆ ಏನಾದರೂ ಅಭಿವೃದ್ಧಿ ಮಾಡಬೇಕು ಅನ್ನೋದು ಇವರ ತಲೆಯಲ್ಲಿದೆಯಾ? ಜನ ಇದನ್ನ ಅರ್ಥ ಮಾಡಿಕೊಳ್ಳಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಅವರು ನನಗೆ ಸಚಿವ ಸ್ಥಾನ ಬೇಡವೆಂದು ಹೇಳಿಕೆ ನೀಡಿರುವ ಮಾಹಿತಿ ನನಗೆ ಗೊತ್ತಿಲ್ಲ. ಜಿಲ್ಲೆಯಲ್ಲಿ ಕ್ರಿಯಾಶೀಲರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಸಂಸದ ಶ್ರೇಯಸ್ ಪಟೇಲ್ ತಿಳಿಸಿದರು.
ನನಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಸ್ಥಾನ ನೀಡಿದರೆ ಮಂತ್ರಿಗಿರಿ ಬಿಡುತ್ತೇನೆ. ಇದನ್ನು ವರಿಷ್ಠರ ಮುಂದೆ ಸ್ಪಷ್ಟಪಡಿಸಿದ್ದೇನೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನ ಅಹಿಂದ ವರ್ಗಕ್ಕೆ ನೀಡುವ ವಿಷಯವನ್ನು ಎಲ್ಲರೂ ಸೇರಿ ಚರ್ಚಿಸಬೇಕಾಗುತ್ತದೆ, ನಮ್ಮನ್ನು ಕೇಳಿದಾಗ ಆ ಬಗ್ಗೆ ಚರ್ಚಿಸುತ್ತೇವೆ, ಈ ವಿಚಾರ ಹೈಕಮಾಂಡ್ ಹಂತದಲ್ಲಿ ಚರ್ಚೆಯಾಗಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದರು.
ಪ್ರಧಾನಿ ಸ್ಥಾನಕ್ಕೆ ಬದಲಾವಣೆ ಅಗತ್ಯವಿದ್ದು, ಭಾರತವನ್ನು ಉಳಿಸಬೇಕಾದರೆ ಮೋದಿ ಅವರ ಜಾಗದಲ್ಲಿ ನಿತಿನ್ ಗಡ್ಕರಿ ಇಲ್ಲವೇ ಬೇರೆ ಯಾರಾದರೂ ಬರುವ ಮೂಲಕ ಯುವಕರ ಹಾಗೂ ಈ ದೇಶದ ಭವಿಷ್ಯ ಉಳಿಸಬೇಕಾಗಿದೆ ಎಂದು ರಾಜ್ಯದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಟೀಕಿಸಿದರು.