ಸಹಕಾರ ಬ್ಯಾಂಕ್‌ಗಳಿಗೆ 439.12 ಕೋಟಿ ರು. ವಂಚನೆ ಪ್ರಕರಣ ಸಂಬಂಧ ತಮ್ಮ ವಿರುದ್ಧ ನ್ಯಾಯಾಲಯಕ್ಕೆ ಸಿಐಡಿ ಆರೋಪಪಟ್ಟಿ ಸಲ್ಲಿಕೆ ಬೆನ್ನಲ್ಲೇ ದಿಢೀರ್ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಅವರು ಬ್ಯಾಂಕಿಗೆ 120 ಕೋಟಿ ರು. ಸಾಲ ಮರುಪಾವತಿಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
ರಾಜ್ಯ ಸಹಕಾರ ಮಂತ್ರಿ ಕೆ.ಎನ್.ರಾಜಣ್ಣ ವಿರುದ್ಧದ ಹನಿಟ್ರ್ಯಾಪ್ ಯತ್ನ ಆರೋಪಕ್ಕೆ ಸಂಬಂಧಿಸಿ ಯಾವುದೇ ಪುರಾವೆಗಳು ಲಭ್ಯವಾಗಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಅಪರಾಧ ತನಿಖಾ ಇಲಾಖೆ (ಸಿಐಡಿ)ಯ ಡಿಜಿಪಿ ಡಾ.ಎಂ.ಎ.ಸಲೀಂ ಮೌಖಿಕವಾಗಿ ವಿವರಣೆ ನೀಡಿದ್ದಾರೆ ಎನ್ನಲಾಗಿದೆ.
ಒಂದೆಡೆ ತಮ್ಮ ಆಪಾದನೆಗೆ ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಅವರು ಸಾಕ್ಷ್ಯ ನೀಡದೆ, ಮತ್ತೊಂದೆಡೆ ಪೂರಕವಾದ ಪುರಾವೆಗಳು ಪತ್ತೆಯಾಗದೆ ಹನಿಟ್ರ್ಯಾಪ್ ಯತ್ನ ಪ್ರಕರಣವೆಂಬುದು ಸಿಐಡಿ ವಿಚಾರಣಾ ತಂಡಕ್ಕೆ ತಲೆನೋವಾಗಿ ಪರಿಣಿಸಿದೆ.
ಬೆಳಗಾವಿ ಅಧಿವೇಶನ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಮೇಲ್ಮನೆ ಸದಸ್ಯ ಸಿ.ಟಿ.ರವಿ ನಡುವಿನ ಆಕ್ಷೇಪಾರ್ಹ ಹೇಳಿಕೆ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಿರುವ ಸರ್ಕಾರದ ಕ್ರಮಕ್ಕೆ ಸಭಾಪತಿ ಬಸವರಾಜ ಹೊರಟ್ಟಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.