ಬಾಲಿವುಡ್‌ನ ಪ್ರಸಿದ್ಧ ನಟರಿಗೆ ಅತ್ಯಾಪ್ತ ಆಗಿದ್ದ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಅವರನ್ನು ಹತ್ಯೆಗೈದ ಪಾತಕಿ ಲಾರೆನ್ಸ್ ಬಿಷ್ಣೋಯಿ ತಂಡದ ಹಿಟ್‌ಲಿಸ್ಟ್‌ನಲ್ಲಿ ಸಿದ್ದಿಕಿ ಅವರ ಪುತ್ರ, ಶಾಸಕ ಜೀಶನ್ ಸಿದ್ದಿಕಿ ಕೂಡ ಇದ್ದರು ಎಂಬ ಮಾಹಿತಿ ತನಿಖೆಯ ವೇಳೆ ಬೆಳಕಿಗೆ ಬಂದಿದೆ.
ಮಹಾರಾಷ್ಟ್ರದ ಮಾಜಿ ಸಚಿವ ಹಾಗೂ ಎನ್‌ಸಿಪಿ (ಅಜಿತ್ ಬಣ) ಮುಖಂಡ ಬಾಬಾ ಸಿದ್ದಿಕಿ ಹತ್ಯೆಯ ಹೊಣೆಯನ್ನು ಚಿತ್ರನಟ ಸಲ್ಮಾನ್ ಖಾನ್ ವಿರುದ್ಧ ಕತ್ತಿ ಮಸೆಯುತ್ತಿರುವ ಪಂಜಾಬ್‌ನ ಕುಖ್ಯಾತ ಪಾತಕಿ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ಹೊತ್ತುಕೊಂಡಿದೆ.
ಈ ಹಿಂದೆ ಸಲ್ಮಾನ್ ಖಾನ್-ಶಾರುಖ್ ಖಾನ್ ಜಗಳ ಬಗೆಹರಿಸಿದ್ದ ಸಲ್ಮಾನ್ ಆಪ್ತ, ಮಾಜಿ ಸಚಿವ ಹಾಗೂ ಎನ್‌ಸಿಪಿ (ಅಜಿತ್ ಬಣ) ನಾಯಕ ಬಾಬಾ ಸಿದ್ದಿಕಿ ಅವರನ್ನು ಶನಿವಾರ ರಾತ್ರಿ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.