ಕೃಷ್ಣೆಗೆ ಸಿಎಂ ಸಿದ್ಧರಾಮಯ್ಯ ಬಾಗಿನ ಅರ್ಪಣೆ
Aug 22 2024, 12:51 AM ISTಕನ್ನಡಪ್ರಭ ವಾರ್ತೆ ಆಲಮಟ್ಟಿ ಆಲಮಟ್ಟಿ ಜಲಾಶಯ ಭರ್ತಿಯಾದ ಹಿನ್ನಲೆಯಲ್ಲಿ ಕೃಷ್ಣಾ ನದಿಗೆ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಸೇರಿದಂತೆ ಸ್ಥಳೀಯ ಸಚಿವರು, ಶಾಸಕರು ಗಂಗಾಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಅಲ್ಲದೇ, ಗಂಗಾ ಪೂಜೆ ಸಲ್ಲಿಸಿ ನಾಡಿನ ರೈತರ ಹಿತ ಕಾಪಾಡುವಂತೆ ಪ್ರಾರ್ಥಿಸಿದರು. ಸಿಎಂ ಸಿದ್ದರಾಮಯ್ಯ ಕೃಷ್ಣೆಗೆ ಬಾಗಿನ ಅರ್ಪಿಸುತ್ತಿರುವುದು ಇದು ಐದನೇ ಬಾರಿ.