‘ಕೆಡಿ ಸಿನಿಮಾ ನಿರ್ಮಾಪಕರು ಬ್ರಾಟ್ ಸಿನಿಮಾ ವಿತರಿಸಲು ಕಾತರದಿಂದಿರುವುದಾಗಿ ಹೇಳಿದ್ದಾರೆ, ಏಕೆಂದರೆ ಅವರ ಸಿನಿಮಾ ರಿಲೀಸೇ ಆಗ್ತಿಲ್ಲವಲ್ಲ.. ಜೋಗಿ ಪ್ರೇಮ್ ಅವರು ಕೆಡಿ ಸಿನಿಮಾ ರಿಲೀಸ್ ಅನ್ನು ಮುಂದಿನ ವರಮಹಾಲಕ್ಷ್ಮೀ ಹಬ್ಬಕ್ಕೆ ಶಿಫ್ಟ್ ಮಾಡಿದ್ರೂ ಅಚ್ಚರಿ ಇಲ್ಲ.
ಸುದೀಪ್ ನಟನೆಯ ‘ಮಾರ್ಕ್’ ಚಿತ್ರದ ಮೊದಲ ಹಾಡು ಸರೆಗಮಪ ಕನ್ನಡ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆ ಆಗಿದೆ. ‘ಸೈಕ್ ಸೈತಾನ್’ ಹೆಸರಿನ ಈ ಮಾಸ್ ಹಾಡಿಗೆ ಅನೂಪ್ ಭಂಡಾರಿ ಸಾಹಿತ್ಯ ಬರೆದಿದ್ದು, ವಿಜಯ್ ಪ್ರಕಾಶ್, ಅಜನೀಶ್ ಲೋಕನಾಥ್, ಅನಿರುದ್ಧ ಶಾಸ್ತ್ರಿ ಹಾಡಿದ್ದಾರೆ.
‘ಮಾರ್ಕ್’ ಚಿತ್ರದ ನಿರ್ದೇಶಕ ವಿಜಯ್ ಕಾರ್ತಿಕೇಯ ಅವರಿಗೆ ಕಿಚ್ಚ ಸುದೀಪ್ ಐಷಾರಾಮಿ ಸ್ಕೋಡಾ ಕುಶಾಕ್ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ‘ಮಾರ್ಕ್’ ಚಿತ್ರದ ಚಿತ್ರೀಕರಣ ಪೂರ್ಣಗೊಂಡ ನಂತರ ಈ ಉಡುಗೊರೆ ನೀಡಲಾಗಿದೆ ಎನ್ನಲಾಗಿದೆ.
ಬಹುಭಾಷೆಯಲ್ಲಿ ಮೂಡಿ ಬರುತ್ತಿರುವ ಕಿಚ್ಚ ಸುದೀಪ್ ಅಭಿನಯದ ‘ಮಾರ್ಕ್’ ಚಿತ್ರದಲ್ಲಿ ನಟಿ ಅರ್ಚನಾ ಕೊಟ್ಟಿಗೆ ನಟಿಸುತ್ತಿದ್ದಾರೆ.
ಜಗತ್ತಿಗೆ ಸೂಪರ್‌ಸ್ಟಾರ್ ಆದರೂ ನನಗವರು ಅಪ್ಪನೇ. ಅಪ್ಪನ ಸಾಧನೆ ಬಗ್ಗೆ ಹೆಮ್ಮೆ ಇದೆ. ಆದರೆ ನನ್ನನ್ನು ಅವರ ಮೂಲಕ ಗುರುತಿಸೋದು ಇಷ್ಟ ಆಗಲ್ಲ ಅನ್ನುತ್ತಾರೆ ಸಾನ್ವಿ ಸುದೀಪ್. ಅವರ ಮಾತುಗಳು..
ಕಿಚ್ಚ ಸುದೀಪ್ ತನ್ನ 52ನೇ ಹುಟ್ಟುಹಬ್ಬ ಆಚರಣೆ ಸಂದರ್ಭದಲ್ಲಿ ರಾಜಕಾರಣ ಪ್ರವೇಶ ಕುರಿತಾಗಿ ಮಾರ್ಮಿಕವಾಗಿ ಮಾತನಾಡಿದ್ದಾರೆ. ‘ನಾನು ರಾಜಕೀಯಕ್ಕೆ ಬರುವ ಬಗ್ಗೆ ಗೊತ್ತಿಲ್ಲ. ಆದರೆ, ಕೆಲವರು ರಾಜಕೀಯಕ್ಕೆ ಬರಬೇಕು ಅನಿಸೋ ರೀತಿ ಆಗಾಗ ಮಾಡ್ತಾರೆ’ ಎಂದು ಹೇಳಿದ್ದಾರೆ.
ನಟ ದಿವಂಗತ ಡಾ। ವಿಷ್ಣುವರ್ಧನ್ ಅವರ ಪುಣ್ಯಭೂಮಿ ವಿವಾದ ಮತ್ತೊಂದು ಸ್ವರೂಪ ಪಡೆದುಕೊಂಡಿದೆ. ಅಭಿಮಾನ್ ಸ್ಟುಡಿಯೋ ಬಳಿಯೇ ಡಾ। ವಿಷ್ಣುವರ್ಧನ್ ದರ್ಶನ ಕೇಂದ್ರ ನಿರ್ಮಾಣ ಮಾಡಲು ಮುಂದಾಗಿದ್ದಾರೆ
ಡಾ.ವಿಷ್ಣುವರ್ಧನ್ ಸಮಾಧಿ ನೆಲಸಮ ಮಾಡಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಅದಕ್ಕೆ ಪೂರಕವಾಗಿ ಈಗ ನಟ ಕಿಚ್ಚ ಸುದೀಪ್ ಸುದೀರ್ಘ ಪತ್ರ ಬರೆದಿದ್ದು, ಸರ್ಕಾರದ ಮಧ್ಯಪ್ರವೇಶಕ್ಕೆ ಆಗ್ರಹಿಸಿದ್ದಾರೆ.
ನಟ ಸುದೀಪ್ ಅವರ ಹೊಸ ಹೇರ್ ಸ್ಟೈಲ್ ಸಾಕಷ್ಟು ವೈರಲ್ ಆಗುತ್ತಿದೆ. ಮೊದಲ ಬಾರಿಗೆ ಹೀಗೆ ಕರ್ಲಿ ಹೇರ್ ಸ್ಟೈಲ್‌ನಲ್ಲಿ ಸುದೀಪ್ ಅವರು ಕಾಣಿಸಿಕೊಂಡಿದ್ದು, ಅವರ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಈ ಹೊಸ ಲುಕ್ಕಿನ ಫೋಟೋಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ.
‘ ಕೆ 47 ಸಿನಿಮಾದಲ್ಲಿ ನನ್ನದು ಮ್ಯಾಕ್ಸ್ ರೀತಿಯ ಸೀರಿಯಸ್ ಪಾತ್ರ ಅಲ್ಲ, ಮುತ್ತತ್ತಿ ಸತ್ಯರಾಜು ಥರದ ಹಿಲೇರಿಯಸ್ ಪಾತ್ರ. ಈಗ ನನಗೆ ಕ್ಯಾಲೆಂಡರ್ ನೋಡಿದರೆ ಭಯ ಆಗುತ್ತೆ - ಸುದೀಪ್