ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಂಕಷ್ಟ ತಂದೊಡ್ಡಿರುವ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣ ಸಂಬಂಧ 600ಕ್ಕೂ ಹೆಚ್ಚು ಸ್ಥಿರಾಸ್ತಿಗಳು ಬೇನಾಮಿ ಹೆಸರಲ್ಲಿರುವುದನ್ನು ಪತ್ತೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿ ಮಹತ್ವದ ಬೆಳವಣಿಗೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿಗೆ ನಿವೇಶನ ಹಂಚಿಕೆ ಮಾಡಿದ ಆರೋಪ ಹೊತ್ತಿರುವ ಮುಡಾ ಮಾಜಿ ಆಯುಕ್ತ ನಟೇಶ್ ಅವರನ್ನು ವಿಚಾರಣೆಗೆ ಸಹಕರಿಸದ ಆರೋಪದ ಮೇರೆಗೆ ಜಾರಿ ನಿರ್ದೇಶನಾಲಯ (ಇ.ಡಿ.) ತನ್ನ ವಶಕ್ಕೆ ಪಡೆದಿದೆ.
ರಾಯಚೂರು ಕ್ಷೇತ್ರದ ಕಾಂಗ್ರೆಸ್ ಸಂಸದ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಜಿ.ಕುಮಾರ್ ನಾಯ್ಕ್ ಅವರು ಮೈಸೂರಿನ ಲೋಕಾಯುಕ್ತ ಎಸ್ಪಿ ಕಚೇರಿಗೆ ಶನಿವಾರ ತೆರಳಿ, ಮುಡಾ ನಿವೇಶನ ಹಂಚಿಕೆ ಸಂಬಂಧ ತನಿಖಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣದ ಹಿನ್ನೆಲೆಯಲ್ಲಿ ಇ.ಡಿ. (ಜಾರಿ ನಿರ್ದೇಶನಾಲಯ) ಅಧಿಕಾರಿಗಳು ಮುಡಾ ಕಚೇರಿ ಮೇಲೆ ಶುಕ್ರವಾರ ದಾಳಿ ನಡೆಸಿದ್ದು, ದಾಖಲಾತಿಗಳ ಪರಿಶೀಲನೆ ಆರಂಭಿಸಿದ್ದಾರೆ.