ಕೊಪ್ಪಳ ಗಣಿ ಹಗರಣ ಸಿಬಿಐ ತನಿಖೆಯಾಗಲಿ
Oct 26 2025, 02:00 AM ISTಕೊಪ್ಪಳ ಜಿಲ್ಲೆಯಲ್ಲಿ ₹400 ಕೋಟಿ ಗಣಿ ಹಗರಣ ನಡೆದ ಬಗ್ಗೆ ಸಿಎಂ ಆರ್ಥಿಕ ಸಲಹೆಗಾರ, ಶಾಸಕ ಬಸವರಾಜ ರಾಯರೆಡ್ಡಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ರಾಜ್ಯದ ಇಡೀ ಗಣಿ ಅಕ್ರಮದ ಸಮಗ್ರ ತನಿಖೆ ಹೊಣೆ ರಾಜ್ಯ ಸರ್ಕಾರ ಸಿಬಿಐಗೆ ಒಪ್ಪಿಸಲಿ ಎಂದು ಬಿಜೆಪಿ ಹಿರಿಯ ಮುಖಂಡ ಯಶವಂತ ರಾವ್ ಜಾಧವ್ ಒತ್ತಾಯಿಸಿದ್ದಾರೆ.