ಹಾವೇರಿ ಕಬ್ಬು ಬೆಳೆಗಾರರಿಗೂ 3,300 ರು. ದರ ನಿಗದಿಗೆ ಒತ್ತಾಯ
Nov 10 2025, 01:30 AM ISTರಾಜ್ಯದ ಕಬ್ಬು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿ ಪ್ರತಿ ಟನ್ ಕಬ್ಬಿಗೆ ೩,೩೦೦ ರು. ದರ ನಿಗದಿ ಪಡಿಸಿ ಆದೇಶ ಹೊರಡಿಸಿರುವುದನ್ನು ಸ್ವಾಗತಿಸಿರುವ ಶಾಸಕ ಶ್ರೀನಿವಾಸ ಮಾನೆ ಉತ್ತರ ಕರ್ನಾಟಕದ ಹೆಬ್ಬಾಗಿಲು ಹಾವೇರಿ ಜಿಲ್ಲೆಯ ಕಬ್ಬು ಬೆಳೆಗಾರರಿಗೂ ಈ ಆದೇಶ ಅನ್ವಯಿಸಿ ನಿಗದಿ ಪಡಿಸಿದ ದರ ದೊರಕಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಕ್ಕರೆ ಸಚಿವ ಶಿವಾನಂದ ಪಾಟೀಲ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.