ದೆಹಲಿಯಲ್ಲಿ ಮತ್ತೊಮ್ಮೆ ಗೆದ್ದು, ಸಿಎಂ ಆಗುವ ಆಶಯದಲ್ಲಿದ್ದ ಆಪ್ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್‌ಗೆ ಭಾರೀ ಆಘಾತವಾಗಿದೆ. ನವದೆಹಲಿ ಕ್ಷೇತ್ರದಲ್ಲಿ ಕೇಜ್ರಿವಾಲ್‌ರನ್ನು ಬಿಜೆಪಿ ಅಭ್ಯರ್ಥಿ ಪರ್ವೇಶ್ ವರ್ಮಾ ಸೋಲಿಸಿ ಗೆಲುವಿನ ನಗೆ ಬೀರಿದ್ದಾರೆ.
ಲೋಕಸಭೆ ಚುನಾವಣೆ ವೇಳೆ ಒಗ್ಗಟ್ಟಾಗಿ ಬಿಜೆಪಿ ನೇತೃತ್ವದ ಎನ್‌ಡಿಎ ವಿರುದ್ಧ ಸೆಣಸಿ ಪ್ರಬಲ ಸ್ಪರ್ಧೆ ನೀಡಿದ್ದ ಇಂಡಿಯಾ ಕೂಟವು ದೆಹಲಿ ಚುನಾವಣೆಯಲ್ಲಿಯೂ ಅದನ್ನೇ ಮುಂದುವರೆಸಿಕೊಂಡು ಬಂದಿದ್ದರೆ, 14 ಕ್ಷೇತ್ರಗಳಲ್ಲಿ ವಿಜಯ ಪತಾಕೆ ಹಾರಿಸಬಹುದಿತ್ತು.
ಆಪ್ ಸರ್ಕಾರವೂ ಮರಳಿ ಚುಕ್ಕಾಣಿ ಹಿಡಿದರೆ ಬಾಲಕರಿಗೆ ಉಚಿತ ಬಸ್ ಪ್ರಯಾಣ, ಮೆಟ್ರೋ ದರದಲ್ಲಿ ಶೇ.50ರಷ್ಟು ರಿಯಾಯ್ತಿಯನ್ನು ನೀಡುವುದಾಗಿ ಘೋಷಿಸಿದೆ.