ಮಳೆಗಾಲ ಮುಗಿದ ಮೇಲೆ ಡಾಂಬರೀಕರಣ ಕಾಮಗಾರಿ ಆರಂಭ: ಪೌರಾಯುಕ್ತ ಬಸವರಾಜ್
Aug 15 2025, 01:00 AM ISTಚಿಕ್ಕಮಗಳೂರು, ನಗರಸಭೆ ವ್ಯಾಪ್ತಿಯಲ್ಲಿರುವ ರಸ್ತೆಗಳ ಡಾಂಬರೀಕರಣಕ್ಕೆ ರಾಜ್ಯ ಸರ್ಕಾರ ವಿವಿಧ ಯೋಜನೆಗಳಡಿ ಕೋಟ್ಯಂತರ ರು. ಬಿಡುಗಡೆ ಮಾಡಿದೆ. ಹಾಗಾಗಿ ಟೆಂಡರ್ ಪ್ರಕ್ರಿಯೆ ಕೂಡ ಮುಗಿಸಿ ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲಾಗಿದೆ. ಮಳೆಗಾಲ ಮುಗಿಯುತ್ತಿದ್ದಂತೆ ಕಾಮಗಾರಿ ಆರಂಭಿಸಲಾಗುವುದು ಎಂದು ನಗರಸಭೆ ಪೌರಾಯುಕ್ತ ಬಿ.ಸಿ. ಬಸವರಾಜ್ ತಿಳಿಸಿದ್ದಾರೆ.