ರಡ್ಡಿ ಸಮಾಜದ ಭಾವನೆಗಳಿಗೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ-ಶಾಸಕ ಪಾಟೀಲ
Aug 18 2025, 12:00 AM ISTರಾಜ್ಯದಲ್ಲಿ ಕೆಲವರು ರಡ್ಡಿ ಸಮಾಜದ ಭಾವನೆಗಳಿಗೆ ಧಕ್ಕೆ ತರುವ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಧರ್ಮದ ಕಾಲಂನಲ್ಲಿ ಹಿಂದೂ ಹಾಗೂ ಉಪಜಾತಿ ಕಾಲಂನಲ್ಲಿ ರಡ್ಡಿ ಅಂತ ನಮೂದಿಸುವಂತೆ ಹೇಳುತ್ತಿದ್ದಾರೆ. ಇದನ್ನು ತಕ್ಷಣವೇ ನಿಲ್ಲಿಸಬೇಕು. ಧರ್ಮದ ಕಾಲಂನಲ್ಲಿ ವೀರಶೈವ ಲಿಂಗಾಯತ ರಡ್ಡಿ ಹಾಗೂ ಉಪಜಾತಿ ಕಾಲಂನಲ್ಲಿ ರಡ್ಡಿ ಅಂತ ನಮೂದಿಸಬೇಕು ಎಂದು ವೀರಶೈವ ಲಿಂಗಾಯತ ರಡ್ಡಿ ಸಮಾಜದ ರಾಜ್ಯ ಗೌರವಾಧ್ಯಕ್ಷ, ರೋಣ ಶಾಸಕ ಜಿ. ಎಸ್. ಪಾಟೀಲ ಹೇಳಿದರು.