‘ಕೇರಳವು ಕಡುಬಡತನ ಮುಕ್ತವಾಗಿದ್ದು, ಈ ಸಾಧನೆ ಮಾಡಿದ ಮೊದಲ ರಾಜ್ಯವಾಗಿದೆ’ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಘೋಷಿಸಿದ್ದಾರೆ. ಕೇರಳ ಸ್ಥಾಪನಾ ದಿನವಾದ ಶನಿವಾರ ನಡೆದ ವಿಶೇಷ ಅಧಿವೇಶನದಲ್ಲಿ ಅವರು ಈ ಮಾಹಿತಿ ನೀಡಿದ್ದಾರೆ.
ಕಳೆದ ವರ್ಷ ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಸದ್ದು ಮಾಡಿದ್ದ ಹಿಜಾಬ್ ಗಲಾಟೆ ಇದೀಗ ಪಕ್ಕದ ಕೇರಳಕ್ಕೂ ಕಾಲಿಟ್ಟಿದೆ. ಇಲ್ಲಿನ ಕ್ರೈಸ್ತ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳು ಹಿಜಾಬ್ ಧರಿಸಿ ಬಂದಿದ್ದು, ಶಾಲೆಯ ಆಡಳಿತ ಇದಕ್ಕೆ ವಿರೋಧ ವ್ಯಕ್ತಪಡಿಸಿದೆ.
ಟ್ಯಾಕ್ಸಿ ಚಾಲಕನಿಗೆ ಮೊಬೈಲ್‌ನಲ್ಲಿ ಅವಹೇಳನಕಾರಿಯಾಗಿ ಮಾತನಾಡಿ ನಿಂದನೆ ಮಾಡಿದ ಆರೋಪದ ಮೇಲೆ ಮಲೆಯಾಳಂ ಹಿರಿಯ ನಟ ಜಯಕೃಷ್ಣನ್ ಅವರನ್ನು ಉರ್ವ ಪೊಲೀಸರು ಶನಿವಾರ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ
ಭಕ್ತಾಧಿಗಳಿಗೆ ಸಮಗ್ರವಾದ ಸೌಲಭ್ಯ ನೀಡುವ ಉದ್ದೇಶದಿಂದ ಕ್ಷೇತ್ರದ ಪಾವಿತ್ರ್ಯತೆ ಹಾಗೂ ಪರಿಸರಕ್ಕೆ ಧಕ್ಕೆ ಆಗದ ರೀತಿಯಲ್ಲಿ ಮುಂದಿನ 25 ವರ್ಷಗಳನ್ನು ಗುರಿಯಾಟ್ಟುಕೊಂಡು ಶಬರಿಮಲೆ ಕ್ಷೇತ್ರವನ್ನು ಅಭಿವೃದ್ಧಿಗೊಳಿಸಲಾಗುವುದು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದರು.