ನಾಡಹಬ್ಬ ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ ಸತತ 5 ಬಾರಿ ಅಂಬಾರಿ ಹೊರಲಿರುವ ಅಭಿಮನ್ಯು ಆನೆಯೇ 2024ನೇ ಸಾಲಿನ ಬಲ ಪರೀಕ್ಷೆಯಲ್ಲಿ ಮೊದಲ ಸ್ಥಾನ ಪಡೆಯುವ ಮೂಲಕ ತಾನೇ ಬಲಶಾಲಿ ಎಂಬುದನ್ನು ಸಾಬೀತುಪಡಿಸಿದೆ.
ನಾಡಹಬ್ಬ ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಆಗಮಿಸಿರುವ ಗಜಪಡೆಗೆ ಮೈಸೂರು ಅರಮನೆಯಲ್ಲಿ ಶುಕ್ರವಾರ ಬೆಳಗ್ಗೆ 10.10ರ ತುಲಾ ಲಗ್ನದಲ್ಲಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುವ ಮೂಲಕ ಸ್ವಾಗತ ಕೋರಲಾಯಿತು.