ಬೆಂಗಳೂರು ವ್ಯಾಪ್ತಿಯಲ್ಲಿ 117 ಕಿ.ಮೀ ಉದ್ದದ ಬೆಂಗಳೂರು ಬಿಸಿನೆಸ್ ಕಾರಿಡಾರ್ ರಸ್ತೆಗೆ (ಪೆರಿಫೆರಲ್ ರಿಂಗ್ ರಸ್ತೆ) ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದ್ದು, ಭೂಮಿ ಕಳೆದುಕೊಂಡ ರೈತರಿಗೆ ನಾಲ್ಕು ರೀತಿಯ ಪರಿಹಾರ ಆಯ್ಕೆ ನೀಡಲಾಗಿದೆ.
ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಕುಟುಂಬ ಸಮೇತರಾಗಿ ಬಂದು ಮಂಗಳವಾರ ಹಾಸನಾಂಬ ದೇವಿ ದರ್ಶನ ಪಡೆದರು. ನಂತರ ಮಾತನಾಡಿ, ಈ ಬಾರಿ ಕಂದಾಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣಬೈರೇಗೌಡರ ನೇತೃತ್ವದಲ್ಲಿ ಉತ್ತಮ ವ್ಯವಸ್ಥೆ ಮಾಡಿದ್ದಾರೆ.
‘ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನದ ವಿಚಾರ ಸಂಖ್ಯಾಬಲದಿಂದ ನಿರ್ಧಾರವಾಗುವುದಿಲ್ಲ, ಎಲ್ಲವನ್ನೂ ಹೈಕಮಾಂಡ್ ನಿರ್ಧರಿಸುತ್ತದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸುರಂಗ ರಸ್ತೆ ಯೋಜನೆಯಿಂದ ಲಾಲ್ಬಾಗ್ಗೆ ಯಾವುದೇ ತೊಂದರೆ ಉಂಟಾಗದಂತೆ ನೋಡಿಕೊಳ್ಳಿ, ಕಟ್ಟಡ ನಿರ್ಮಾಣ ಪರವಾನಗಿ, ಸ್ವಾಧೀನಾನುಭವ ಪ್ರಮಾಣ ಪತ್ರದ ಸಮಸ್ಯೆ ಪರಿಹರಿಸಿ, ಕಸ ಸಂಗ್ರಹ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸುವುದರಿಂದ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ
ರಾಜ್ಯದಲ್ಲಿ ಸದ್ಯಕ್ಕೆ ಸಚಿವ ಸಂಪುಟ ಪುನಾರಚನೆ ಹಾಗೂ ಅಧಿಕಾರ ಹಂಚಿಕೆ ಯಾವುದೂ ಇಲ್ಲ. ಇಂಥ ಯಾವುದೇ ಚರ್ಚೆಯೂ ನಡೆದಿಲ್ಲ. ಚರ್ಚೆ ನಡೆದಿದೆ ಎಂಬುದು ಗಾಳಿ ಸುದ್ದಿಯಷ್ಟೆ. ನವೆಂಬರ್ ಕ್ರಾಂತಿ ಸಾಧ್ಯತೆ ಅಲ್ಲಗಳೆದ ಉಪಮುಖ್ಯಮಂತ್ರಿ
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪತ್ನಿ ಉಷಾ ಶಿವಕುಮಾರ್ ಗಣತಿದಾರರಿಗೆ ಮಾಹಿತಿ ನೀಡುವ ಮೂಲಕ ಸಮೀಕ್ಷೆಗೆ ಚಾಲನೆ ನೀಡಿದರು. ಸಮೀಕ್ಷೆ ವೇಳೆ ಪ್ರಶ್ನೆಗಳ ಸರಮಾಲೆಗೆ ಡಿ.ಕೆ.ಶಿವಕುಮಾರ್ ಗಣತಿದಾರರ ಮೇಲೆ ಗರಂ ಆದರಲ್ಲದೆ, ಟೂ-ಮಚ್(ತುಂಬಾ) ಪ್ರಶ್ನೆ ಎಂದು ಆಕ್ಷೇಪವನ್ನೂ ವ್ಯಕ್ತಪಡಿಸಿದರು.
ಮುಂದಿನ ಎರಡು ವರ್ಷವೂ ನಾನೇ ಸಿಎಂ ಎಂದು ಸಿದ್ದರಾಮಯ್ಯ ಪುನಃ ಹೇಳಿದ್ದಾರೆ, ಆದ್ದರಿಂದ ಡಿ.ಕೆ. ಶಿವಕುಮಾರ್ ಬಗ್ಗೆ ಅನುಕಂಪ ಉಂಟಾಗುತ್ತಿದೆ ಎಂದು ರಾಜ್ಯ ಬಿಜೆಪಿ ಕಾರ್ಯದರ್ಶಿ ಸುನಿಲ್ ವಿ.ಕುಮಾರ್ ಹೇಳಿದ್ದಾರೆ.
ಮಂಗಳೂರು ದಸರಾ ಸಂಭ್ರಮದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕುದ್ರೋಳಿ ಕ್ಷೇತ್ರಕ್ಕೆ ಭೇಟಿ ನೀಡಿದರು.ದೇವರ ಬಲಿ ಉತ್ಸವದ ಶುಭ ಸಂದರ್ಭದಲ್ಲಿ ದೇವಸ್ಥಾನ ಪ್ರವೇಶಿಸಿ ದೇವರ ರಥಾರೋಹಣ ನಂತರ ರಥದ ಚಕ್ರಕ್ಕೆ ತೆಂಗಿನಕಾಯಿ ಒಡೆದು, ಭಕ್ತರೊಂದಿಗೆ ರಥೋತ್ಸವದಲ್ಲಿ ಭಾಗಿಯಾದರು.