ಧರ್ಮಸ್ಥಳ ವಿರುದ್ಧ ಷಡ್ಯಂತ್ರ ತನಿಖೆ ಎನ್ಐಎಗೆ ಒಪ್ಪಿಸಿ
Aug 26 2025, 01:02 AM ISTಹಿಂದೂಗಳ ಪವಿತ್ರ, ಪುಣ್ಯಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡನೀಯ. ಗಿರೀಶ ಮಟ್ಟಣ್ಣನವರ್, ಮಹೇಶ ಶೆಟ್ಟಿ ತಿಮರೋಡಿ ಸೇರಿ ನಾಲ್ಕು ಜನರಷ್ಟೇ ಅಲ್ಲ, ಈ ಪ್ರಕರಣದ ಹಿಂದೆ ದೊಡ್ಡ ಷಡ್ಯಂತ್ರವೇ ಇದೆ. ತಮಿಳುನಾಡಿನ ಕಾಂಗ್ರೆಸ್ ಸಂಸದ ಸೆಂಥಿಲ್ ಎಂಬ ವ್ಯಕ್ತಿ ಸಹ ಇದ್ದು, ಆತ ಹಿಂದೆ ಮಂಗಳೂರು ಡಿಸಿಯೂ ಆಗಿದ್ದ. ಎಡಪಂಥೀಯದ ಆತನನ್ನು ಮೊದಲು ಬಂಧಿಸಬೇಕು ಎಂದು ಆಗ್ರಹಿಸಿ, ಬಿಜೆಪಿ ಉತ್ತರ ವಿಧಾನಸಭಾ ಕ್ಷೇತ್ರದಿಂದ ಜಿಲ್ಲಾ ಘಟಕದಿಂದ ನಗರದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಲಾಯಿತು.