ಚಿನ್ನ ಕಳ್ಳ ಸಾಗಣೆ ಪ್ರಕರಣದ ಬಂಧಿತ ಆರೋಪಿ, ಡಿಜಿಪಿ ಅವರ ಮಲ ಮಗಳು ರನ್ಯಾ ರಾವ್ ಹಾಗೂ ಆಕೆಯ ಇಬ್ಬರು ಸ್ನೇಹಿತರ ವಿರುದ್ಧ ಕಂದಾಯ ಗುಪ್ತಚರ ಜಾರಿ ನಿರ್ದೇಶನಾಲಯ (ಡಿಆರ್ಐ)ವು ವಿದೇಶಿ ವಿನಿಮಯ ಸಂರಕ್ಷಣೆ ಹಾಗೂ ಕಳ್ಳ ಸಾಗಣೆ ಚಟುವಟಿಕೆಗಳ ನಿಯಂತ್ರಣ ಕಾಯ್ದೆ (ಕಾಫಿಪೊಸಾ) ಪ್ರಯೋಗಿಸಿದೆ.
ಬಾಲಿವುಡ್ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರು, ತಮ್ಮ ಆಪ್ತರಾಗಿರುವ ವಿಶ್ವದ ನಂ.1 ಶ್ರೀಮಂತ ಎಲಾನ್ ಮಸ್ಕ್ ಅವರ ತಾಯಿ ಮಾಯೆ ಮಸ್ಕ್ ಅವರೊಂದಿಗೆ ಈಸ್ಟರ್ನಂದು ನಗರದ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದರು.
ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧಿತ ನಟಿ ರನ್ಯಾ ರಾವ್ ಕಳೆದ ನಾಲ್ಕು ತಿಂಗಳಲ್ಲಿ ಸುಮಾರು 38.39 ಕೋಟಿ ರು. ಹಣವನ್ನು ಹವಾಲಾ ಮೂಲಕ ದುಬೈಗೆ ವರ್ಗಾಹಿಸಿ 49.6 ಕೆ.ಜಿ. ಚಿನ್ನ ಖರೀದಿಸಿದ್ದರು.
ದುಬೈನಿಂದ ನಗರಕ್ಕೆ ಚಿನ್ನ ಅಕ್ರಮ ಸಾಗಣೆ ಪ್ರಕರಣದಲ್ಲಿ ಜಾಮೀನು ಕೋರಿ ನಟಿ ರನ್ಯಾ ರಾವ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರಕ್ಕೆ ಮುಂದೂಡಿದೆ.
ನಟಿ ರನ್ಯಾ ರಾವ್ ದುಬೈನಿಂದ ಚಿನ್ನ ಕಳ್ಳ ಸಾಗಣೆ ಮಾಡುವ ವೇಳೆ ತನ್ನ ಸ್ನೇಹಿತ ಹಾಗೂ ಪಾಲುದಾರ ತರುಣ್ ರಾಜ್ನ ಅಮೆರಿಕ ಪಾಸ್ಪೋರ್ಟ್ ಬಳಸಿಕೊಂಡಿರುವುದು ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್ಐ) ಅಧಿಕಾರಿಗಳ ತನಿಖೆಯಲ್ಲಿ ಬೆಳಕಿಗೆ ಬಂದಿದೆ.