ಎಸ್ಸೆಸ್ಸೆಲ್ಸಿ ಪರೀಕ್ಷೆ ಟಾಪರ್‌ ಉತ್ಸವ್ ಪಟೇಲ್‌ಗೆ ಸನ್ಮಾನ

May 04 2025, 01:36 AM IST
ವಿಜಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವ್ಯಾಸಂಗ ಮಾಡಿ ೨೦೨೪-೨೫ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ೬೨೫ ಅಂಕಗಳಿಗೆ ೬೨೫ ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿರುವ ಉತ್ಸವ್ ಪಟೇಲ್‌ರನ್ನು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸರ್ಕಾರಿ ಪ್ರಾಥಮಿಕ ಹಾಗೂ ಮಾಧ್ಯಮಿಕ ಕ್ಷೇಮಾಭಿವೃದ್ಧಿ ಸಂಘ ಹಾಸನ ಜಿಲ್ಲಾ ಘಟಕದ ವತಿಯಿಂದ ಶನಿವಾರ ಸನ್ಮಾನಿಸಿ ಗೌರವಿಸಿದರು. ನಮ್ಮ ಜಿಲ್ಲೆಯ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಕೊಂಡೊಯ್ದ ನಮ್ಮ ಹೆಮ್ಮೆಯ ಸುಪುತ್ರ ಉತ್ಸವ್ ಪಟೇಲ್ ಇವರ ಮುಂದಿನ ಭವಿಷ್ಯ ಉಜ್ವಲದಿಂದ ಕೂಡಿರಲಿ ಎಂದು ಈ ವಿದ್ಯಾರ್ಥಿಯು ಎಲ್ಲ ವಿದ್ಯಾರ್ಥಿಗಳಿಗೆ ಆದರ್ಶ ರೂಪವಾಗಿ ಹೊರಹೊಮ್ಮಲೆಂದು ಹಾರೈಸಿದರು.