ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭದ್ರತೆ ಮತ್ತಷ್ಟು ಹೆಚ್ಚಿಸಿದ ಪಾಕಿಸ್ತಾನ
May 02 2025, 12:10 AM ISTಪಹಲ್ಗಾಂ ದಾಳಿಗೆ ಭಾರತವು ಪ್ರತೀಕಾರದ ಶಪಥ ಮಾಡಿರುವ ಬೆನ್ನಲ್ಲೇ ಪಾಕಿಸ್ತಾನವು ಇದೀಗ ಮುಂಬೈ ದಾಳಿ ರೂವಾರಿ, ನಿಷೇಧಿತ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ಗೆ ಬಿಗಿ ಭದ್ರತೆ ಕಲ್ಪಿಸಿದೆ. ಪಾಕಿಸ್ತಾನ ಸೇನೆ, ಐಎಸ್ಐ ಮತ್ತು ಲಷ್ಕರ್-ಎ-ತೊಯ್ಬಾ ಉಗ್ರರು ಜಂಟಿಯಾಗಿ ಆತನ ಭದ್ರತೆಯ ಹೊಣೆ ಹೊತ್ತುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.