ಭಾರತದ ಆಮದು ಪ್ರಮಾಣ ಅಧಿಕ
Apr 19 2025, 12:33 AM ISTಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಆಯೋಜಿಸಿದ್ದ ಮೂರು ದಿನಗಳ ರೊಟೇಟಿಂಗ್ ಮೆಷಿನರಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬೃಹತ್ ಕೈಗಾರಿಕಾ ಕ್ಷೇತ್ರದಲ್ಲಿ ಆಮದು ಪ್ರಮಾಣ ತಗ್ಗಿಸುವ ಉದ್ದೇಶದಿಂದ ಬೃಹತ್ ಕೈಗಾರಿಕೆಗಳ ಸಚಿವಾಲಯ ಸಾಕಷ್ಟು ಉಪಕ್ರಮಗಳನ್ನು ಕೈಗೆತ್ತಿಕೊಂಡಿದೆ. ತಂತ್ರಜ್ಞಾನ ಮತ್ತು ಮಾನವ ಸಂಪನ್ಮೂಲದ ಅಭಿವೃದ್ಧಿ ಸಾಧಿಸುವ ಉದ್ದೇಶದಿಂದ ಬೃಹತ್ ಕೈಗಾರಿಕೆಗಳ ಸಚಿವಾಲಯ ಸಮೃದ್ಧಿ ಯೋಜನೆ ಜಾರಿಗೆ ತಂದಿದ್ದು, ಅದರ ಅಡಿಯಲ್ಲಿ ಈ ತರಬೇತಿ ಕಾರ್ಯಾಗಾರವನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.