ರಾಜ್ಯದಲ್ಲಿ ಮುಂದಿನ ಒಂದು ವಾರ ಮಳೆ ದುರ್ಬಲವಾಗಿರಲಿದ್ದು, ಜುಲೈ ಕೊನೆ ಹಾಗೂ ಆಗಸ್ಟ್ ಮೊದಲ ವಾರದಲ್ಲಿ ಹೆಚ್ಚಿನ ಪ್ರಮಾಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕೊಡಗು, ಕರಾವಳಿ, ಮಲೆನಾಡು ಭಾಗದಲ್ಲಿ ಭಾರೀ ಮಳೆ ಮುಂದುವರಿದಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಬೆಳಗಾವಿಯಲ್ಲಿ ಮನೆ ಕುಸಿದು ಎರಡು ಆಟೋ, ಒಂದು ದ್ವಿಚಕ್ರ ವಾಹನಗಳು ಜಖಂಗೊಂಡಿವೆ.