ವಿಶೇಷ ಪೂಜೆ ಸಲ್ಲಿಸಿ ಹಣದ ಮಳೆ ಸುರಿಸುವುದಾಗಿ ನಂಬಿಸಿ ಜನರಿಗೆ ವಂಚಿಸುತ್ತಿದ್ದ ನಕಲಿ ಸ್ವಾಮೀಜಿ ಹಾಗೂ ಆತನ ಕೆಲವಾರು ಶಿಷ್ಯರನ್ನು ಪೊಲೀಸರು ಬಂಧಿಸಿ 18 ಲಕ್ಷ ರು. ಜಪ್ತಿ ಮಾಡಿದ್ದಾರೆ.
ಮೂರು ದಿನ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮಳೆ ಹಿನ್ನೆಲೆಯಲ್ಲಿ ಮಂಗಳವಾರ ಐದು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಾಳೆ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ರಾಜ್ಯದ ಕೆಲವೆಡೆ ವರುಣಾರ್ಭಟ ಮುಂದುವರೆದಿದ್ದು, ಸೋಮವಾರ ಯಾದಗಿರಿ, ಕೊಡಗು, ತುಮಕೂರು ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಮಳೆ ಸುರಿದಿದೆ. ಸತತ ಮಳೆಯಿಂದಾಗಿ ಈಗಾಗಲೇ ಬೆಳೆದಿರುವ ಬೆಳೆಗಳು ಹಾನಿಯಾಗುವ ಆತಂಕದಲ್ಲಿ ರೈತರಿದ್ದಾರೆ.
ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿದ್ದ ವಾಯುಭಾರ ಕುಸಿತವು ಮೋಂಥಾ ಹೆಸರಿನ ಚಂಡಮಾರುತವಾಗಿ ಪರಿವರ್ತಿತವಾಗಿದ್ದು, ಸೋಮವಾರ ಆಂಧ್ರಪ್ರದೇಶದ ಕರಾವಳಿಯ ಮೇಲೆ ಅಪ್ಪಳಿಸಿದೆ. ಜೊತೆಗೆ ಮಂಗಳವಾರ ಸಂಜೆಯ ವೇಳೆಗೆ ಅದು ಇನ್ನಷ್ಟು ತೀವ್ರ ಸ್ವರೂಪ ಪಡೆದು