ಕುಂದಾಪುರ: ಕೊಲ್ಲೂರು ನದಿಯಲ್ಲಿ ಮುಳುಗಿ ಬೆಂಗಳೂರಿನ ಮಹಿಳೆ ಸಾವು
Aug 31 2025, 02:00 AM ISTಆ.27ರಂದು ಅವರು ಒಬ್ಬಂಟಿಯಾಗಿ ಕೊಲ್ಲೂರಿಗೆ ಬಂದಿದ್ದು, ಖಾಸಗಿ ವಸತಿಗೃಹದ ಬಳಿ ಕಾರು ನಿಲ್ಲಿಸಿ, ದೇಗುಲಕ್ಕೆ ತೆರಳಿ ಆಂಜನೇಯ ಗುಡಿಯಲ್ಲಿ ಕೆಲಕಾಲ ಧ್ಯಾನ ಮಾಡಿದ್ದರು. ನಂತರ ದೇವಾಲಯದ ಪರಿಸರದಲ್ಲಿ ತಿರುಗಾಡಿ, ಸೌಪರ್ಣಿಕಾ ನದಿಯತ್ತ ತೆರಳಿರುವುದು ಸಿಸಿ ಕ್ಯಾಮರಗಳಲ್ಲಿ ಸೆರೆಯಾಗಿದೆ.