ನಾಳೆ ಅರಸೀಕೆರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ
Jul 25 2025, 12:30 AM ISTಅರಸೀಕೆರೆಗೆ ಮುಖ್ಯಮಂತ್ರಿಗಳು ಹಾಗೂ ಇತರೆ ಸಚಿವರು ಆಗಮಿಸಲಿದ್ದು, ಪೂರ್ಣಗೊಂಡಿರುವ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಹಲವು ಕಾಮಗಾರಿಗೆ ಶಂಕುಸ್ಥಾಪನೆಯನ್ನು ಅವರು ನೆರವೇರಿಸಲಿದ್ದಾರೆ ಎಂದು ಶಾಸಕ ಕೆಎಂ ಶಿವಲಿಂಗೇಗೌಡ ತಿಳಿಸಿದರು. ಸರ್ಕಾರದ ಖಜಾನೆ ಖಾಲಿಯಾಗಿದೆ ಸರಕಾರದಲ್ಲಿ ದುಡ್ಡಿಲ್ಲ ಎಂದು ಹೇಳುತ್ತಿರುವ ವಿರೋಧ ಪಕ್ಷದವರಿಗೆ ಉತ್ತರ ನೀಡುವ ಸಮಾವೇಶ ಇದಾಗಿದೆ ಎಂದರು. ಕ್ಷೇತ್ರಕ್ಕೆ ಅನೇಕ ಯೋಜನೆಗಳನ್ನು ಕೊಟ್ಟಿದ್ದಾರೆ. ಕೃತಜ್ಞತೆಯನ್ನು ಸಲ್ಲಿಸುವ ಒಂದು ಕೃತಜ್ಞತಾ ಸಮಾರಂಭ ಅಥವಾ ಅಭಿನಂದನಾ ಸಮಾರಂಭ ಎಂದು ಹೇಳಬಹುದು.