ಬೈಪಾಸ್ ಆದರೂ ಸಕಲೇಶಪುರದಲ್ಲಿ ತಗ್ಗದ ವಾಹನ ದಟ್ಟಣೆ
Jun 18 2025, 03:37 AM ISTಬೈಪಾಸ್ ರಸ್ತೆಯಲ್ಲಿ ವಾಹನ ಸಂಚಾರ ಆರಂಭಕ್ಕೂ ಮುನ್ನ ಪಟ್ಟಣದ ಹೃದಯ ಭಾಗದಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಗಳೂರು-ಮಂಗಳೂರು ನಡುವೆ ಸಾವಿರಾರು ವಾಹನಗಳು ನಿತ್ಯ ಸಂಚರಿಸುತ್ತಿದ್ದವು. ಇದರಿಂದಾಗಿ ಪಟ್ಟಣ ವ್ಯಾಪ್ತಿಯಲ್ಲಿ ನಿತ್ಯ ವಾಹನ ದಟ್ಟಣೆ ಅತಿಯಾಗಿತ್ತು. ಬೈಪಾಸ್ ರಸ್ತೆ ಸಂಚಾರಕ್ಕೆ ಮುಕ್ತಗೊಂಡ ನಂತರ ವಾಹನ ದಟ್ಟಣೆ ನಿಯಂತ್ರಣಕ್ಕೆ ಬರಲಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದವು. ಆದರೆ, ವಾರದಲ್ಲಿ ಒಂದೆರಡು ದಿನಗಳನ್ನು ಹೊರತುಪಡಿಸಿದರೆ ಪಟ್ಟಣದಲ್ಲಿ ಎಂದಿನಂತೆ ವಾಹನ ದಟ್ಟಣೆ ಅತಿಯಾಗಿದೆ.