ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ತಡೆಯುವಂತೆ ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದ ಬೆನ್ನಲ್ಲೇ ಕಳೆದ ಒಂದು ವರ್ಷದಲ್ಲಿ 967 ಮಂದಿ ನಕಲಿ ವೈದ್ಯರು ಪತ್ತೆಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಬಹಿರಂಗಪಡಿಸಿದೆ.
ಸರ್ಕಾರಿ ಆಸ್ಪತ್ರೆ ವೈದ್ಯ ರು ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಹೊರಗೆ ಪ್ರ್ಯಾಕ್ಟೀಸ್ ಮಾಡುವಂತಿಲ್ಲ. ಇದರ ಮೇಲ್ವಿಚಾರಣೆಗಾಗಿ 4 ಬಾರಿ ಬಯೋಮೆಟ್ರಿಕ್ ಹಾಜರಾತಿ ಪಡೆದುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು.
ವರ್ಷವಾದರೂ ವೈದ್ಯರಿಗಿಲ್ಲ ಪಗಾರ ! ಶೀರ್ಷಿಕೆಯಡಿ, ಕನ್ನಡಪ್ರಭದಲ್ಲಿ ಪ್ರಕಟಗೊಂಡಿದ್ದ ವರದಿಗೆ ಸ್ಪಂದಿಸಿದ ಸರ್ಕಾರ, ಗ್ರಾಮೀಣ ಪ್ರದೇಶಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲಿನ 20ಕ್ಕೂ ಹೆಚ್ಚು ತಜ್ಞವೈದ್ಯರು ಸೇರಿದಂತೆ 126 ವಿವಿಧ ಸಿಬ್ಬಂದಿ ಸೋಮವಾರ, ಬಾಕಿಯಿದ್ದ 5.25 ಕೋಟಿ ರು. ವೇತನ ಬಿಡುಗಡೆ ಮಾಡಿದೆ.