ಎಲ್ಲಾ ಸರ್ಕಾರಿ ಶಾಲೆಗಳಿಗೆ ಶೌಚಾಲಯ ವ್ಯವಸ್ಥೆ ಕಲ್ಪಿಸಿ

Jun 17 2025, 01:59 AM IST
ಬಾಣಾವರದ ಹಿರಿಯ ನಾಗರಿಕ ವೇದಿಕೆ ವತಿಯಿಂದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ಭೇಟಿ ಮಾಡಿ ಬಾಣಾವರ ಸರ್ಕಾರಿ ಆಸ್ಪತ್ರೆ ಆವರಣವನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ ಆಸ್ಪತ್ರೆ ಆಸ್ಪತ್ರೆ ಕಟ್ಟಡ ಹಾಗೂ ನಿವೇಶನಕ್ಕೆ ಈ ಸ್ವತ್ತು ವಿತರಿಸುವಂತೆ ಹಾಗೂ ಎಲ್ಲಾ ಸರ್ಕಾರಿ ಶಾಲೆಗಳಿಗೆ ಶೌಚಾಲಯ ವ್ಯವಸ್ಥೆ ಕಲ್ಪಿಸುವಂತೆ ಮನವಿ ಸಲ್ಲಿಸಲಾಯಿತು. ಸರ್ಕಾರಿ ಆಸ್ಪತ್ರೆ ಆವರಣವನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ ಆಸ್ಪತ್ರೆಯ ಸುಚಿತ್ವವನ್ನು ಕಾಪಾಡಿ ರೋಗಿಗಳಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತೆ ಹಾಗೂ ಬಾಣಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟಂತಹ ನಿವೇಶನದಲ್ಲಿ ಹಿರಿಯ ನಾಗರೀಕರ ವೇದಿಕೆಯ ಕಚೇರಿ ನಿರ್ಮಾಣ ಮಾಡಲು ನಿವೇಶನ ನೀಡುವಂತೆ ಮನವಿ ಸಲ್ಲಿಸಿದರು.