ಸಹಕಾರ ಕ್ಷೇತ್ರದಿಂದಾಗಿ ಕೃಷಿ ಸೇರಿ ಹಲವು ಕ್ಷೇತ್ರಗಳಿಗೆ ದೊಡ್ಡ ಚೈತನ್ಯ ಸಿಕ್ಕಿದೆ. ಲಕ್ಷಾಂತರ ಕುಟುಂಬಗಳು ಬದುಕುತ್ತಿವೆ. ಸಹಕಾರ ಕ್ಷೇತ್ರ ಗಟ್ಟಿಯಾದರೆ ಆರ್ಥಿಕ ಹಾಗೂ ಸಾಮಾಜಿಕ ಚೈತನ್ಯ ಹೆಚ್ಚಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
‘ನವೆಂಬರ್ ಕ್ರಾಂತಿ’ ಹೇಳಿಕೆ ನೀಡಿ ಕುತೂಹಲ ಕೆರಳಿಸಿದ್ದ ತಮ್ಮ ಆಪ್ತ, ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರು ತುಮಕೂರಿನ ತಮ್ಮ ನಿವಾಸಲ್ಲಿ ಶುಕ್ರವಾರ ಆಯೋಜಿಸಿರುವ ಔತಣಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಇದು ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಸೃಷ್ಟಿಸಿದೆ.