ರಾಜ್ಯ ರಾಜಕಾರಣದಲ್ಲಿ ಜಂಪಿಂಗ್ ಸ್ಟಾರ್ ಎಂದೇ ಹೆಸರುವಾಸಿಯಾಗಿರುವ ಸಿ.ಪಿ.ಯೋಗೇಶ್ವರ್, ಬುಧವಾರ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಳ್ಳುವ ಮೂಲಕ ತಮ್ಮ 25 ವರ್ಷಗಳ ರಾಜಕೀಯ ಜೀವನದಲ್ಲಿ 5ನೇ ಬಾರಿಗೆ ಪಕ್ಷಾಂತರ ಮಾಡಿದ್ದಾರೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ವಿರುದ್ಧ ಅವರ ಪುತ್ರಿ ನಿಶಾ ಯೋಗೇಶ್ವರ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದು, ಎಲ್ಲವನ್ನೂ ಬೆಳಕಿಗೆ ತರುತ್ತೇನೆ ಎಂದು ಗುಡುಗಿದ್ದಾರೆ.
ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ನಿಂದ ಡಿ.ಕೆ.ಸುರೇಶ್ ಅವರನ್ನು ಕಣಕ್ಕಿಳಿಸುವಂತೆ ಕಾರ್ಯಕರ್ತರು, ಮುಖಂಡರಿಂದ ತೀವ್ರ ಒತ್ತಡವಿದೆ. ಆಕಾಂಕ್ಷಿತರ ಪಟ್ಟಿಯಲ್ಲಿ ಪುಟ್ಟಣ್ಣ, ಅಶ್ವಥ್, ರಘುನಂದನ್ ಹೆಸರುಗಳೂ ಇವೆ. ನೂರಕ್ಕೆ ನೂರು ಡಿ.ಕೆ.ಸುರೇಶ್ ಅವರನ್ನೇ ಕಣಕ್ಕಿಳಿಸಬೇಕೆಂದು ತೀವ್ರ ಒತ್ತಾಯವಿದೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಿ.ಪಿ. ಯೋಗೇಶ್ವರ್ ಅವರು ಬಯಸಿದ್ದಾರೆ. ಬಿಜೆಪಿ ಅಥವಾ ಜೆಡಿಎಸ್ ಚಿಹ್ನೆಯಿಂದ ಸ್ಪರ್ಧಿಸಲು ಸಿದ್ಧ ಎಂದು ಹೇಳಿದ್ದಾರೆ. ಕನ್ನಡಪ್ರಭದೊಂದಿಗೆ ಈ ಬಗ್ಗೆ ಮಾತನಾಡಿದ್ದಾರೆ.
ಮುಂಬರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಟಿಕೆಟ್ ಹಂಚಿಕೆ ಮಿತ್ರ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ಗೆ ‘ಅಗ್ನಿಪರೀಕ್ಷೆ’ಯಂತಾಗುವುದು ನಿಶ್ಚಿತವಾಗಿದೆ.