ಬಹುಭಾಷಾ ಪಂಡಿತ, ವಾಗ್ಮಿ, ಸಂವಾದಿ ಫೈರ್‌ಬ್ರ್ಯಾಂಡ್ ನಾಯಕ ಸೀತಾರಾಂ ಯೆಚೂರಿ ಇನ್ನಿಲ್ಲ
Sep 13 2024, 01:33 AM ISTಬಹುಭಾಷಾ ಪಂಡಿತ, ವಾಗ್ಮಿ, ಸಂವಾದಿ ಫೈರ್‌ಬ್ರ್ಯಾಂಡ್ ನಾಯಕ ಸೀತಾರಾಂ ಯೆಚೂರಿ (72) ಗುರುವಾರ ನವದೆಹಲಿಯಲ್ಲಿ ನಿಧನರಾದರು. ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಯೆಚೂರಿ ಅವರು ಪತ್ನಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ.