ಹುಲಿ ಹತ್ಯೆ ಕೇಸ್: 4 ಆರೋಪಿಗಳಿಗೆ ವೈದ್ಯಕೀಯ ಪರೀಕ್ಷೆ
Oct 06 2025, 01:00 AM ISTಮಲೆ ಮಹದೇಶ್ವರ ವನ್ಯಜೀವಿಧಾಮದ ಪಚ್ಚೆದೊಡ್ಡಿಯಲ್ಲಿ ಹುಲಿ ಹತ್ಯೆ ಪ್ರಕರಣದ ತನಿಖೆ ಅಂತಿಮ ಘಟ್ಟಕ್ಕೆ ಬಂದಿದ್ದು, ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಯಲ್ಲಿ ಭಾನುವಾರ ಬೆಳಗ್ಗೆ ನಾಲ್ವರು ಆರೋಪಿಗಳಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ಹನೂರು ತಾಲೂಕಿನ ಪಚ್ಚೆದೊಡ್ಡಿ ಗ್ರಾಮದ ಪಚ್ಚಮಲ್ಲ, ಗಣೇಶ್, ಗೋವಿಂದೇಗೌಡ, ಸಂಪು ಎಂಬವರನ್ನು ಅರಣ್ಯಾಧಿಕಾರಿಗಳು ಆಸ್ಪತ್ರೆಗೆ ಕರೆತಂದು ವೈದ್ಯಕೀಯ ಪರೀಕ್ಷೆ ಮಾಡಿಸಿದ್ದಾರೆ. ನಾಲ್ವರನ್ನು ಕೂಡ ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.