ಸ್ಥಳೀಯ ಸಂಸ್ಥೆಗಳ ಉಪಚುನಾವಣೆ ಫಲಿತಾಂಶ: ನಾಲ್ಕೂ ಕಡೆ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು
Dec 31 2023, 01:30 AM ISTರಾಯಚೂರು ಜಿಲ್ಲೆಯಲ್ಲಿ ಎರಡು ನಗರಸಭೆ ಹಾಗೂ ಎರಡು ಪುರಸಭೆ ಸೇರಿ ನಾಲ್ಕು ಸ್ಥಾನಗಳಲ್ಲಿ ಮೂರು ಕಡೆ ಚುನಾವಣೆ ನಡೆದರೆ, ಒಂದು ಕಡೆ ಅವಿರೋಧ ಆಯ್ಕೆ ನಡೆದಿದ್ದು ಎಲ್ಲ ಕಡೆ ಕಾಂಗ್ರೆಸ್ ಗೆಲುವು ಸಾಧಿಸಿದೆ. ರಾಯಚೂರು ನಗರಸಭೆಯ 12 ನೇ ವಾರ್ಡ್, ಸಿಂಧನೂರಿನ 22ನೇ ವಾರ್ಡ್, ದೇವದುರ್ಗದ 5ನೇ ವಾರ್ಡ್ ನಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಲಿಂಗಸೂಗೂರು 19 ನೇ ವಾರ್ಡ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅವಿರೋಧ ಆಯ್ಕೆಯಾಗಿದ್ದಾರೆ.