ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್. ಅಂಬೇಡ್ಕರ್ ಹಾಸ್ಟೆಲ್ಗಳಲ್ಲಿ ಬೋಗಸ್ ದಾಖಲಾತಿ, ಹಾಜರಾತಿ ತಪ್ಪಿಸಿ ಅನುದಾನ ಮತ್ತು ಸಂಪನ್ಮೂಲಗಳ ದುರುಪಯೋಗ ನಿಯಂತ್ರಿಸಲು ‘ಆಧಾರ್ ಆಧಾರಿತ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ’ಯನ್ನು ಜಾರಿಗೊಳಿಸುವ ಪ್ರಸ್ತಾವ ಸರ್ಕಾರದ ಮುಂದಿದೆ ಎಂದು ತಿಳಿದು ಬಂದಿದೆ.