ಡಾ. ಬಿ.ಆರ್.ಅಂಬೇಡ್ಕರ್ 133 ನೇ ಜನ್ಮ ದಿನಾಚರಣೆ
Apr 15 2024, 01:16 AM ISTಬೆಳಗಾವಿ: ನಗರದಲ್ಲಿ ಸಂವಿಧಾನ ಶಿಲ್ಪಿ ಹಾಗೂ ಭಾರತ ರತ್ನ ಡಾ. ಬಿ.ಆರ್.ಅಂಬೇಡ್ಕರ ಅವರ 133ನೇ ಜನ್ಮದಿನಾಚರಣೆಯನ್ನು ಜಿಲ್ಲಾಡಳಿತದ ವತಿಯಿಂದ ಭಾನುವಾರ ಅದ್ದೂರಿಯಿಂದ ಆಚರಿಸಲಾಯಿತು. ಮೊದಲಿಗೆ ಸದಾಶಿವ ನಗರದಲ್ಲಿರುವ ಬುದ್ಧ ವಿಹಾರದಲ್ಲಿ ಬುದ್ಧನ ಪ್ರತಿಮೆಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಎಸ್ಪಿ ಡಾ.ಭೀಮಾಶಂಕರ ಗುಳೇದ, ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್, ಜಿಪಂ ಸಿಇಒ ರಾಹುಲ್ ಶಿಂಧೆ ಅವರು ಪುಷ್ಪ ಸಮರ್ಪಿಸಿದರು.