ರಾಜ್ಯದಲ್ಲಿ 10 ಕೆಜಿ ಅಕ್ಕಿ ವಿತರಣೆ ಯಾವಾಗ ?

Dec 01 2023, 12:45 AM IST
ಕನ್ನಡಪ್ರಭ ವಾರ್ತೆ ಧಾರವಾಡಈಗಾಗಲೇ ಕೇಂದ್ರ ಸರ್ಕಾರ ಐದು ಕೆಜಿ ಅಕ್ಕಿ ನೀಡುತ್ತಿದೆ. ರಾಜ್ಯ ಸರ್ಕಾರ 10 ಕೆಜಿ ಅಕ್ಕಿ ನೀಡುವುದು ಯಾವಾಗ? ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನಿಸಿದ್ದಾರೆ.ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನೇತೃತ್ವದಲ್ಲಿ ಕ್ಯಾಬಿನೆಟ್ ಸಭೆಯಲ್ಲಿ 5 ಕೆಜಿ ಪಡಿತರ ಅಕ್ಕಿ ವಿತರಣೆ ಮುಂದುವರೆಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದರು.ದೇಶದ 80 ಕೋಟಿ ಜನರಿಗೆ ಐದು ಕೆಜಿ ಅಕ್ಕಿ ವಿತರಿಸಲಾಗುತ್ತಿದೆ. ಕರ್ನಾಟಕದ ಆರೂವರೆ ಕೋಟಿ ಜನಸಂಖ್ಯೆ ಪೈಕಿ ಶೇ.50ರಷ್ಟು ಜನರಿಗೆ ಇದರ ಲಾಭ ಸಿಗಲಿದೆ. ಚುನಾವಣೆ ಪೂರ್ವ 10 ಕೆಜಿ ಅಕ್ಕಿ ನೀಡುವುದಾಗಿ ಸಾರ್ವಜನಿಕವಾಗಿ ಭಾಷಣ ಮಾಡಿದ ಕಾಂಗ್ರೆಸ್ ನಾಯಕರು, ಇದೀಗ ಅಕ್ಕಿ ನೀಡುತ್ತಿಲ್ಲ ಏತಕೆ? ಎಂದು ಪ್ರಶ್ನಿಸಿದರು.

ಗೋದಾಮಲ್ಲಿದ್ದ ಅಕ್ಕಿ ವ್ಯರ್ಥ: ವರದಿ ಕೇಳಿದ ಮುಖ್ಯ ಕಾರ್ಯದರ್ಶಿ

Nov 22 2023, 01:00 AM IST
ಬಡವರಿಗೆ ನೀಡುವ ಅಕ್ಕಿಯನ್ನು ಗೋಡೌನ್‌ನಲ್ಲಿ ಕಳೆದ 2 ವರ್ಷಗಳಿಂದ ಸಂಗ್ರಹಿಸಿ ಇಲಿ, ಹೆಗ್ಗಣ, ಹುಳುಗಳ ಪಾಲಾಗಿಸಿರುವ ಬಗ್ಗೆ ಕನ್ನಡಪ್ರಭ ವರದಿ ಮಾಡಿತ್ತು. ಇದರ ಬೆನ್ನಲ್ಲೆ ಆಹಾರ ಮತ್ತು ನಾಗರಿಕ ಇಲಾಖೆ ಮುಖ್ಯ ಕಾರ್ಯದರ್ಶಿಗಳು ವರದಿ ಕೇಳಿದ್ದು, ಆಹಾರ ನಿಗಮದ ಮೇಲಾಧಿಕಾರಿಗಳು ಪರಿಶೀಲನೆ ನಡೆಸಿ ಕ್ರಮಕ್ಕೆ ಮುಂದಾಗಿದ್ದಾರೆ.ನೆಲಮಂಗಲದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಗೋಡೌನ್‌ನಲ್ಲಿ ಅಕ್ಕಿ ವ್ಯರ್ಥವಾಗುತ್ತಿರುವ ಬಗ್ಗೆ ನ.21 ರಂದು ಕನ್ನಡಪ್ರಭ ಪತ್ರಿಕೆಯಲ್ಲಿ ‘ಗೋದಾಮಲ್ಲಿ ಅಕ್ಕಿ ಅನಾಥ’ ಎಂಬ ಶೀರ್ಷಿಕೆಯಲ್ಲಿ ವರದಿ ಪ್ರಕಟಗೊಂಡಿತ್ತು. ಈ ಬಗ್ಗೆ ಸಚಿವರ ಗಮನಕ್ಕೆ ಬಂದಿದ್ದು, ಇಲಾಖೆಯ ಮುಖ್ಯ ಕಾರ್ಯದರ್ಶಿಗಳು ವರದಿ ಕೇಳಿದ ಬೆನ್ನಲ್ಲೆ ಆಹಾರ ನಿಗಮ ಪ್ರಧಾನ ವ್ಯವಸ್ಥಾಪಕ ಪ್ರಸನ್ನ ಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿ, ಗೋಡೌನ್ ಸ್ಥಿತಿ ಹಾಗೂ ಸಂಗ್ರಹಣೆ ಕುರಿತು ಕಳವಳ ವ್ಯಕ್ತಪಡಿಸಿ ಅಮಾನತು ಮಾಡುವ ಎಚ್ಚರಿಕೆ ನೀಡಿದ್ದಾರೆ.