ವಸತಿ ನಿಲಯಗಳಿಗೆ ಸೋನಾ ಮಸೂರಿ ಅಕ್ಕಿ ಪೂರೈಕೆಗೆ ಚಿಂತನೆ
Oct 17 2023, 12:45 AM ISTಮುಂಬರುವ ದಿನಗಳಲ್ಲಿ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯ ಸೇರಿದಂತೆ ಎಲ್ಲ ವಸತಿ ನಿಲಯಗಳಿಗೆ ಸೋನಾ ಮಸೂರಿ ಅಕ್ಕಿ ಪೂರೈಸುವ ಕುರಿತು ಚರ್ಚೆ ನಡೆದಿದೆ ಎಂದು ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಹಾಗೂ ಕ್ರೀಡಾ ಸಚಿವ ಬಿ. ನಾಗೇಂದ್ರ ಹೇಳಿದರು. ಗಂಗಾವತಿ ನಗರದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಆನಂತರ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯಕ್ಕೆ ದಿಢೀರ್ ಭೇಟಿ ನೀಡಿದ ಅವರು, ಪತ್ರಕರ್ತರೊಂದಿಗೆ ಮಾತನಾಡಿದರು.