ಈ ತಿಂಗಳಿನಿಂದ ಪಡಿತರದಲ್ಲಿ ಅಕ್ಕಿಯ ಜೊತೆಗೆ ಜೋಳವನ್ನು ವಿತರಿಸಲಾಗುತ್ತಿದೆ. ಪ್ರತಿ ತಿಂಗಳು 10ನೇ ತಾರೀಖಿ ನಂತರ ಫಲಾನುಭವಿಗಳಿಗೆ ಆಹಾರಧಾನ್ಯ ವಿತರಿಸಲಾಗುತ್ತಿದೆ.
ಅನ್ನಭಾಗ್ಯ ಯೋಜನೆಯಡಿ ಪ್ರತಿ ಫಲಾನುಭವಿಗೆ ಇನ್ನು ಮುಂದೆ ಪ್ರತಿ ತಿಂಗಳು ತಲಾ 10 ಕೆ.ಜಿ. ಅಕ್ಕಿ ಲಭ್ಯವಾಗಲಿದ್ದು, ಡಿಬಿಟಿ ಮೂಲಕ ಬ್ಯಾಂಕ್ ಖಾತೆಗೆ ಜಮಾ ಆಗುತ್ತಿರುವ 5 ಕೆ.ಜಿ. ಹೆಚ್ಚುವರಿ ಅಕ್ಕಿಯ ಹಣ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.