ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅನ್ನಭಾಗ್ಯ ಅಕ್ಕಿ ವಶಕ್ಕೆ
Aug 02 2024, 01:00 AM ISTಕನ್ನಡಪ್ರಭ ವಾರ್ತೆ ಇಂಡಿ ಪಟ್ಟಣದ ಮನೆಯೊಂದರಲ್ಲಿ ಸರ್ಕಾರದ ಅನ್ನಭಾಗ್ಯ (ಪಡಿತರ) ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ಖಚಿತ ಮಾಹಿತಿ ಆಧರಿಸಿ ಆಹಾರ ನಿರೀಕ್ಷಕರು ಮತ್ತು ಪೊಲೀಸರು ದಾಳಿ ನಡೆಸಿ, ಸುಮಾರು ₹1,24,700 ಮೌಲ್ಯದ 4,300 ಕೆಜಿ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ. ಆಹಾರ ನಿರೀಕ್ಷಕ ಪರಮಾನಂದ ಹೂಗಾರ ಹಾಗೂ ಇಂಡಿ ಶಹರ ಪೊಲೀಸ್ ಠಾಣೆ ಸಿಪಿಐ ರತನಕುಮಾರ ಜಿರಗ್ಯಾಳ ದಾಳಿ ಮಾಡಿದರು.