ಸಕಾಲಕ್ಕೆ ಬಾರದ ವೇತನ, ಅಗ್ನಿಶಾಮಕ ದಳದ ಸಿಬ್ಬಂದಿಗೆ ಸಂಕಷ್ಟ
Dec 23 2023, 01:45 AM ISTಕುರುಗೋಡು ಸಮೀಪದ ಕುಡತಿನಿಯ ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಆವರಣದಲ್ಲಿ ಇರುವ ಅಗ್ನಿಶಾಮಕ ದಳದ ಗುತ್ತಿಗೆ ಆಧಾರಿತ ನೌಕರರಿಗೆ ಕೆಲವು ತಿಂಗಳಿಂದ ಸರಿಯಾದ ಸಮಯಕ್ಕೆ ಸಂಬಳ ಸಿಗುತ್ತಿಲ್ಲ. ಬಿಟಿಪಿಎಸ್ ಆಡಳಿತ ಮಂಡಳಿ, ಟೆಂಡರ್ ಪಡೆದ ಏಜೆನ್ಸಿಯ ತಾಂತ್ರಿಕ ಸಮಸ್ಯೆಯಿಂದ ಪ್ರತಿ ತಿಂಗಳು ವೇತನ ವಿಳಂಬವಾಗುತ್ತಿದೆ ಎಂದು ಹೇಳಲಾಗುತ್ತಿದೆ. ಅದರಿಂದ ಗುತ್ತಿಗೆ ಆಧಾರದ ನೌಕರರು ಸಮಸ್ಯೆ ಎದುರಿಸುವಂತಾಗಿದೆ.