ಅಮಿತ್ ಶಾ ಹೇಳಿಕೆ ಖಂಡಿಸಿ ವಿರುದ್ಧ ರಾಷ್ಟ್ರಪತಿಗೆ ದೂರು
Dec 21 2024, 01:19 AM ISTಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಲೋಕಸಭೆ ಅಧಿವೇಶನದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹೆಸರಿನ ಬದಲು ದೇವರನ್ನು ಜಪಿಸಿದರೆ ಸ್ವರ್ಗದಲ್ಲಿ ಸ್ಥಾನ ಸಿಗುತ್ತಿತ್ತು ಎಂಬ ಹೇಳಿಕೆ ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ನಾಗವರ ಬಣ) ದೇವರಹಿಪ್ಪರಗಿ ತಾಲೂಕು ಘಟಕದಿಂದ ಕ್ರಮಕ್ಕೆ ಆಗ್ರಹಿಸಿ ತಹಸೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಶುಕ್ರವಾರ ಮನವಿ ಸಲ್ಲಿಸಿದರು.