ಕೆಲ ದಿನಗಳ ಹಿಂದೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪರೋಕ್ಷವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘2025ರ ಸೆ.17ಕ್ಕೆ ಪ್ರಧಾನಿ ನರೇಂದ್ರ ಮೋದಿಗೆ 75 ವರ್ಷ ತುಂಬುತ್ತದೆ. ಹೀಗಾಗಿ 2025ರ ಬಳಿಕ ಅವರು ಪ್ರಧಾನಿಯಾಗಿರುವುದಿಲ್ಲ. ಅಮಿತ್ ಶಾ ಪ್ರಧಾನಿಯಾಗಲಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರಿಗೆ 2025ರಲ್ಲಿ 75 ತುಂಬಲಿದ್ದು, ಪ್ರಧಾನಿ ಹುದ್ದೆಯನ್ನು ಗೃಹ ಸಚಿವ ಅಮಿತ್ ಶಾ ಅವರಿಗೆ ಬಿಟ್ಟುಕೊಡಲಿದ್ದಾರೆ ಎಂಬ ಆಪ್ ನೇತಾರ ಅರವಿಂದ ಕೇಜ್ರಿವಾಲ್ ಹೇಳಿಕೆಯನ್ನು ಖುದ್ದು ಶಾ ಹಾಗೂ ರಕ್ಷಣಾ ಸಚಿವ ರಾಜನಾಥ ಸಿಂಗ್ ತಳ್ಳಿಹಾಕಿದ್ದಾರೆ.