ಬೊಂಬೆನಾಡಿನಲ್ಲಿಂದು ಅಮಿತ್ ಶಾ ರೋಡ್ ಶೋ
Apr 02 2024, 01:04 AM ISTಚನ್ನಪಟ್ಟಣ: ಕಾಂಗ್ರೆಸ್ ಭದ್ರಕೋಟೆ ಎನಿಸಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದ್ದು, ಈ ಬಾರಿಯ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಕಮಲ ಅರಳಿಸಲು ಎನ್‌ಡಿಎ ಅಭ್ಯರ್ಥಿ ಡಾ. ಮಂಜುನಾಥ್ ಪರ ಪ್ರಚಾರಕ್ಕೆ ಕೇಂದ್ರ ಗೃಹ ಸಚಿವ, ಬಿಜೆಪಿ ಚುನಾವಣಾ ಚಾಣಕ್ಯ ಅಮಿತ್ ಶಾ ಅವರನ್ನು ಕರೆತರುತ್ತಿದೆ. ಏ.೨ರ ಮಂಗಳವಾರ ಚನ್ನಪಟ್ಟಣದಲ್ಲಿ ರೋಡ್ ಶೋ ನಡೆಸಲಿರುವ ಅಮಿತ್ ಶಾ ಎನ್‌ಡಿಎ ಅಭ್ಯರ್ಥಿ ಡಾ.ಮಂಜುನಾಥ್ ಪರ ಮತಯಾಚಿಸಲಿದ್ದಾರೆ