ಅಮಿತ್ ಶಾ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ
Jan 09 2025, 12:47 AM ISTಬಾಬಾ ಸಾಹೇಬ್ ಅಂಬೇಡ್ಕರ್ ಅವರ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವಹೇಳನಕಾರಿ ಹೇಳಿಕೆ ಖಂಡಿಸಿ ಹಾಸನದ ಬೂವನಹಳ್ಳಿ ಬೈಪಾಸ್ ಬಳಿ ಬುಧವಾರ ವಿವಿಧ ದಲಿತ ಪರ ಸಂಘಟನೆಗಳು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಸಂಘಟನೆಗಳ ಮುಖಂಡರನ್ನು ಪೊಲೀಸರು ಬಂಧಿಸಿದ ಘಟನೆ ನಡೆಯಿತು. ಸಂವಿಧಾನದ ಆಧಾರದ ಮೇಲೆ ಸಚಿವರಾಗಿರುವ ಅಮಿತ್ ಶಾ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.