ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ಇಂದು ಮೈಸೂರು ಬಂದ್ ಗೆ ಕರೆ
Jan 07 2025, 12:15 AM ISTಕೇಂದ್ರ ಸಚಿವ ಅಮಿತ್ ಶಾ ಅವರು ಸಂವಿಧಾನಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಸದನದಲ್ಲಿ ಅಪಮಾನಿಸಿ ನೀಡಿರುವ ಹೇಳಿಕೆ ಖಂಡಿಸಿ ಡಾ.ಬಿ.ಆರ್. ಅಂಬೇಡ್ಕರ್ ಅಭಿಮಾನಿಗಳ ಹೋರಾಟ ಸಮಿತಿಯು ಜ.7ರ ಬೆಳಗ್ಗೆ 6 ರಿಂದ ಸಂಜೆ 4 ರವರೆಗೆ ಮೈಸೂರು ಬಂದ್ ಕರೆ ನೀಡಿದೆ. ಅಲ್ಲದೆ, ಪುರಭವನ ಆವರಣದಲ್ಲಿ ಮಧ್ಯಾಹ್ನ 2 ರಿಂದ ಸಂಜೆ 4 ರವರೆಗೆ ವೇದಿಕೆ ಕಾರ್ಯಕ್ರಮ ಆಯೋಜಿಸಿದೆ.