ಆಧುನಿಕತೆಗನುಗುಣವಾಗಿ ಅರಣ್ಯ ಇಲಾಖೆ ಬದಲಾಗುತ್ತಿದ್ದು, ಅರಣ್ಯ ಒತ್ತುವರಿ, ಅಕ್ರಮ ಮರ ಕಡಿತ, ಕಳ್ಳಬೇಟೆ, ಅತಿಕ್ರಮ ಪ್ರವೇಶ ಸೇರಿ ಇತ್ಯಾದಿ ಅರಣ್ಯ ಅಪರಾಧಗಳಿಗೆ ಇನ್ನು ಮುಂದೆ ‘ಗರುಡಾಕ್ಷಿ’ ಅಸ್ತ್ರ ಪ್ರಯೋಗಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಮಲೆನಾಡು ಜಿಲ್ಲೆಗಳಲ್ಲಿನ ಆನೆಗಳ ಹಾವಳಿ ತಡೆಗೆ ಭದ್ರಾ ವನ್ಯಜೀವಿ ಸಂರಕ್ಷಿತಾರಣ್ಯ ವ್ಯಾಪ್ತಿಯ 2 ಸಾವಿರ ಹೆಕ್ಟೇರ್ ಅರಣ್ಯ ಪ್ರದೇಶದಲ್ಲಿ ಎಲಿಫೆಂಟ್ ಸಾಫ್ಟ್ ರಿಲೀಸ್ ಸೆಂಟರ್ ನಿರ್ಮಾಣಕ್ಕೆ ಯೋಜನೆ ರೂಪಿಸುತ್ತಿದ್ದು, 2025-26ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಯೋಜನೆ ಘೋಷಿಸುವ ಸಾಧ್ಯತೆಗಳಿವೆ.
ಕಳೆದ ಒಂದು ವಾರದಿಂದ ತಾಲೂಕಿನ ಹಿರೇಬೆಣಕಲ್ನ ಸಮೀಪದ ಐತಿಹಾಸಿಕ ಮೋರೇರ ಶಿಲಾ ಸಮಾಧಿಗಳ ಬಳಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಕೇಂದ್ರ ಸರ್ಕಾರ ಅಣು ವಿದ್ಯುತ್ ಸ್ಥಾವರ ಸ್ಥಾಪನೆಗಾಗಿ ನಡೆಸಿದ ಪ್ರಕ್ರಿಯೆ ಈಗ ಮುಂದುವರಿದಿದೆ.
ಬಂಡೀಪುರದಲ್ಲಿ ಹೊಸ ವರ್ಷದ ಸಂಭ್ರಮಕ್ಕೆ ಅರಣ್ಯ ಇಲಾಖೆ ಬ್ರೇಕ್ ಹಾಕಿದ್ದು ಡಿ.31 ಮತ್ತು ಜ.1 ರಂದು ಪ್ರವಾಸಿಗರಿಗೆ ವಸತಿ ಗೃಹಗಳು ನೀಡದಿರಲು ಅರಣ್ಯ ಇಲಾಖೆ ಮುಂದಾಗಿದೆ.