ದೆಹಲಿ ಅಬಕಾರಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದಡಿ ಕಳೆದ 2 ವರ್ಷದಿಂದ ಬಂಧನಕ್ಕೊಳಗಾಗಿದ್ದ ದೆಹಲಿಯ ಆಪ್ ಸರ್ಕಾರದ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ದೆಹಲಿ ಹೈಕೋರ್ಟ್ ಶುಕ್ರವಾರ ಜಾಮೀನು ನೀಡಿದೆ.
ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ ಭಾಗವತ್ ಅವರಿಗೆ ಪತ್ರ ಬರೆದಿದ್ದಾರೆ ಹಾಗೂ 5 ಪ್ರಶ್ನೆ ಕೇಳಿದ್ದಾರೆ.
ಅರವಿಂದ ಕೇಜ್ರಿವಾಲ್ ಅಬಕಾರಿ ಹಗರಣದಲ್ಲಿ ಜೈಲು ಸೇರಿರುವ ಕಾರಣ, ಇದೇ ಹಗರಣದಲ್ಲಿ ಬಂಧಿತರಾಗಿ ಈಗಷ್ಟೇ ಜೈಲಿನಿಂದ ಹೊರಬಂದಿರುವ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ದೆಹಲಿ ಮತ್ತು ಹರ್ಯಾಣದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯ ಪ್ರಚಾರ ನೇತೃತ್ವ ವಹಿಸಿಕೊಳ್ಳಲು ಸಜ್ಜಾಗಿದ್ದಾರೆ.
ಆಮ್‌ಆದ್ಮಿ ಪಕ್ಷದ ನಾಯಕರಿಗೆ, ತೆಲಂಗಾಣದ ಬಿಆರ್‌ಎಸ್ ಪಕ್ಷದ ನಾಯಕಿ ಕೆ.ಕವಿತಾ 100 ಕೋಟಿ ರು. ಲಂಚ ನೀಡಿದ್ದರು. ಹೀಗೆ ನೀಡಿದ ಲಂಚಕ್ಕೆ ಪ್ರತಿಯಾಗಿ ತಮಗೆ ಬೇಕಾದ ಮದ್ಯ ಕಂಪನಿಗಳ ಮೂಲಕ 192 ಕೋಟಿ ರು. ಅಕ್ರಮ ಲಾಭ ಪಡೆದುಕೊಂಡಿದ್ದಾರೆ.