ಸ್ಮಾರ್ಟ್‌ಸಿಟಿ ಕಾಮಗಾರಿಗಳಲ್ಲಿ ಅವ್ಯವಹಾರ: ತನಿಖೆಗೆ ಆಪ್ ಆಗ್ರಹ
Dec 08 2023, 01:45 AM ISTಜಿಲ್ಲೆಯ ಪ್ರವಾಸದಲ್ಲಿರುವ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹುಬ್ಬಳ್ಳಿಯ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ವೀಕ್ಷಿಸಿದರು.ಗುರುವಾರ ಬೆಳಗ್ಗೆ ನಗರದ ಚಿಟಗುಪ್ಪಿ ಆಸ್ಪತ್ರೆಗೆ ಭೇಟಿ ನೀಡಿ ಕಾಮಗಾರಿ ವೀಕ್ಷಿಸುವುದರ ಜತೆಗೆ ವೈದ್ಯ ಹಾಗೂ ರೋಗಿಗಳ ಕುಂದುಕೊರತೆ ಆಲಿಸಿದರು.ಬಳಿಕ ಲ್ಯಾಮಿಂಗ್ಟನ್ ಶಾಲೆ ಭೇಟಿ ನೀಡಿ ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ ಅಭಿವೃದ್ಧಿಪಡಿಸಲಾದ ಸ್ಮಾರ್ಟ್ ಕ್ಲಾಸ್ ರೂಮ್‌ಗಳ ಪರಿಶೀಲಿಸಿದರು.