ಶಿಕ್ಷಣ ಹಾಗೂ ಆರೋಗ್ಯ ವ್ಯಾಪಾರೀಕರಣ
Jan 13 2025, 12:45 AM ISTಶಿಕ್ಷಣ ಮತ್ತು ಆರೋಗ್ಯ ಸಂಪೂರ್ಣವಾಗಿ ವ್ಯಾಪಾರೀಕರಣವಾಗುತ್ತಿದ್ದು, ಇದು ನೋವಿನ ಸಂಗತಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ. ನಾರಾಯಣ್ ತಿಳಿಸಿದರು. ಸರ್ಕಾರಿ ಶಾಲೆಗಳು, ಸರ್ಕಾರಿ ಆಸ್ಪತ್ರೆಗಳು ಉಳಿದು, ಬೆಳೆದಾಗ ಜನಸಾಮಾನ್ಯರು, ಬಡವರಿಗೆ ಶಿಕ್ಷಣ ಮತ್ತು ಆರೋಗ್ಯ ಸೇವೆ ಸುಲಭವಾಗಿ ದೊರಕಲು ಸಾಧ್ಯವಾಗುತ್ತದೆ. ಹಳೆಯ ವಿದ್ಯಾರ್ಥಿಗಳು ಒಗ್ಗೂಡಿ ಶಾಲೆಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿರುವುದು ಹರ್ಷದಾಯಕ ಸಂಗತಿಯಾಗಿದ್ದು, ಇದು ಎಲ್ಲ ಶಾಲೆಗಳಲ್ಲೂ ಸಾಕಾರಗೊಳ್ಳುವಂತಾಗಬೇಕು ಎಂದರು.