ಆರೋಗ್ಯ ಸೇವೆಯ ಜಾಗೃತಿಗೆ ಕಲಾತಂಡಗಳು ಶ್ರಮಿಸಲಿ
Dec 15 2023, 01:30 AM ISTಹೊಸಪೇಟೆಜಾನಪದ ಕಲೆ ಮೂಲಕ ಜನಸಾಮಾನ್ಯರಿಗೆ ಆರೋಗ್ಯ ಸೇವೆಗಳ ಕುರಿತು ಅರಿವು ಮೂಡಿಸಲು ಎಲ್ಲ ಕಲಾತಂಡಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ತಿಳಿಸಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕನ್ನಡ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಮಂಗಳವಾರ ಕನ್ನಡ ವಿಶ್ವವಿದ್ಯಾಲಯದ ಭುವನ ವಿಜಯ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಲಬುರಗಿ ವಿಭಾಗೀಯ ಮಟ್ಟದ ಜಾನಪದ ಕಲಾತಂಡಗಳ ತರಬೇತಿ ಕಾರ್ಯಾಗಾರಕ್ಕೆ ತಮಟೆ ಬಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.