ಶೇ.40 ಪರ್ಸೆಂಟ್ ಲಂಚ ಆರೋಪ ಕುರಿತು ತನಿಖೆ ನಡೆಸಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ನೇತೃತ್ವದ ವಿಚಾರಣಾ ಆಯೋಗ ಸಲ್ಲಿಸಿರುವ ವರದಿಯನ್ನು ಕೂಲಂಕಷವಾಗಿ ಅಧ್ಯಯನ ಮಾಡಿ ವರದಿ ಸಲ್ಲಿಸಲು ಡಾ.ಸುಧೀರ್ ಕೃಷ್ಣ ಅಧ್ಯಕ್ಷತೆಯಲ್ಲಿ ರಾಜ್ಯ ಸರ್ಕಾರ ಸಮಿತಿ ರಚಿಸಿದೆ.